21 September 2026 |

ರೆಡ್ ಅಲರ್ಟ್: ನಾಳೆ ಜುಲೈ 2 ರಂದು ದಕ್ಷಿಣ ಕನ್ನಡದ ಶಾಲೆ, ಅಂಗನವಾಡಿಗಳಿಗೆ ರಜೆ

  • 01 Jul 2026 06:54:35 PM

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

 

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ನಿರ್ದೇಶನದ ಪ್ರಕಾರ, ಜುಲೈ 2, 2026 (ಗುರುವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಹೈಸ್ಕೂಲ್ ಶಾಲೆಗಳು ಹಾಗೂ 12ನೇ ತರಗತಿಯವರೆಗೆ (ದ್ವಿತೀಯ ಪಿಯುಸಿ) ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

 

ಜೊತೆಗೆ ಸಾರ್ವಜನಿಕರಿಗೆ ಸೂಚನೆಗಳನ್ನು ಕೂಡ ಜಾರಿಗೊಳಿಸಲಾಗಿದೆ:

* ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಿ.

* ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

* ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

* ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸನ್ನದ್ಧರಾಗಿರಬೇಕು.

* ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ.

 

ತುರ್ತು ಸನ್ನಿವೇಶದಲ್ಲಿ ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿ, ದಕ್ಷಿಣ ಕನ್ನಡ ಜಿಲ್ಲೆ ಇವರಿಗೆ 1077 / 0824-2442590 ಗೆ ಕರೆ ಮಾಡುವುದರ ಮೂಲಕ ಸಂಪರ್ಕಸಲು ಕೋರಲಾಗಿದೆ.