ಪುತ್ತೂರು: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಯುವತಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ ಗುರುವಾರ ಮಧ್ಯಾಹ್ನ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ನಡೆದಿದೆ.
ಆರೋಪಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಕೆಲವರು ಸೇರಿಕೊಂಡು ಪರಸ್ಪರ ಮಾತಿನ ಚಕಮಕಿ ನಡೆಸಿದರೆಂದು ತಿಳಿದುಬಂದಿದೆ. ಬಳಿಕ ವಾಗ್ವಾದ ತೀವ್ರಗೊಂಡು ನೂಕಾಟ-ತಳ್ಳಾಟಕ್ಕೂ ಕಾರಣವಾಗಿದೆಯೆಂದು ಹೇಳಲಾಗಿದೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದಾಗ, ಪ್ರಕರಣಕ್ಕೆ ಸಂಬಂಧಿಸಿದವರು ಅಲ್ಲಿಂದ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.
ಈ ಘಟನೆಯ ಕುರಿತು ಇನ್ನಷ್ಟು ವಿವರಗಳು ಲಭ್ಯವಾಗಬೇಕಿದ್ದು, ಪೊಲೀಸರು ಮಾಹಿತಿ ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.





