05 July 2026 |

ಬಿಜೆಪಿ ನಾಯಕರ ಕಾರಿನ ಬಾನೆಟ್‌ ಮೇಲೆ ಹತ್ತಿದ ಬುರ್ಖಾ ಧರಿಸಿದ ಮಹಿಳೆ: ಸ್ಥಳದಲ್ಲಿ ಗೊಂದಲ

  • 04 Jul 2026 02:49:59 PM

ಲಖನೌ: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಧಾಂಪುರ ಪ್ರದೇಶದಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬರು ಬಿಜೆಪಿ ಧ್ವಜ ಅಳವಡಿಸಿದ್ದ ಕಾರಿನ ಬಾನೆಟ್‌ ಮೇಲೆ ಹತ್ತಿ ಪ್ರತಿಭಟನೆ ನಡೆಸಿದಂತಿರುವ ಘಟನೆ ನಡೆದಿದೆ.

 

ಈ ವೇಳೆ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಲಭ್ಯವಿರುವ ಮಾಹಿತಿಯ ಪ್ರಕಾರ, ಮಹಿಳೆ ಕಾರಿನ ಬಾನೆಟ್‌ ಮೇಲೆ ಹತ್ತಿ ಕೆಲಕಾಲ ಗದ್ದಲ ಸೃಷ್ಟಿಸಿದರೆಂದು ಹೇಳಲಾಗಿದೆ. ಸ್ಥಳದಲ್ಲಿದ್ದ ಜನರು ಮತ್ತು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

 

ಆದರೆ, ಮಹಿಳೆ ಈ ರೀತಿಯಾಗಿ ವರ್ತಿಸಲು ಕಾರಣವೇನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಈ ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಅದರ ಹಿನ್ನೆಲೆ ಕುರಿತು ವಿವಿಧ ರೀತಿಯ ಊಹಾಪೋಹಗಳು ವ್ಯಕ್ತವಾಗುತ್ತಿವೆ.