ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರದ ಹೆಸರಿನಲ್ಲಿ ಉದ್ಯಮಿಯೊಬ್ಬರಿಂದ ₹70 ಲಕ್ಷ ಪಡೆದು ವಂಚನೆ ಎಸಗಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಜೀನತ್ ಇಬ್ರಾಹಿಂಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ರಿಯಲ್ ಎಸ್ಟೇಟ್ ಹೂಡಿಕೆಯಿಂದ ಲಾಭ ದೊರೆಯಲಿದೆ ಎಂದು ನಂಬಿಸಿ ಉದ್ಯಮಿಯಿಂದ ₹70 ಲಕ್ಷ ಪಡೆದಿದ್ದಾಳೆ ಎನ್ನಲಾಗಿದೆ. ಬಳಿಕ ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ, ಉದ್ಯಮಿಯ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ.
ಈ ಸಂಬಂಧ ಉದ್ಯಮಿ ನೀಡಿದ ದೂರಿನ ಆಧಾರದ ಮೇಲೆ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ತನಿಖೆಯ ವೇಳೆ ಮಹಿಳೆಯನ್ನು ಬಂಧಿಸಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.





