07 July 2026 |

ಕಲ್ಲಡ್ಕ ನರಹರಿ ಪರ್ವತ ಬಳಿ ಭೀಕರ ಅಪಘಾತ: ಬೈಕ್–ಕಾರು ಮುಖಾಮುಖಿ ಡಿಕ್ಕಿ, ಯುವಕ ಸಾವು

  • 06 Jul 2026 09:43:03 AM

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ–ಮೇಲ್ಕಾರ್ ನಡುವಿನ ನರಹರಿ ಪರ್ವತ ಸಮೀಪ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟಿದ್ದಾರೆ.

 

ಮೃತರನ್ನು ಪುತ್ತೂರು ತಾಲೂಕಿನ ಕೊಡಿಪಾಡಿ ನಿವಾಸಿ 31 ವರ್ಷದ ಅಶೋಕ್ ಎಂದು ಗುರುತಿಸಲಾಗಿದೆ.

 

ಲಭ್ಯ ಮಾಹಿತಿಯಂತೆ, ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅಪಘಾತದಲ್ಲಿ ಅಶೋಕ್ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

 

ಘಟನೆಯ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.