10 July 2026 |

ಮಂಗಳೂರು ಪ್ರದೇಶಗಳಲ್ಲಿ ಕಾಮಾಲೆ ರೋಗ: ಆರೋಗ್ಯ ಇಲಾಖೆಯ ಎಚ್ಚರಿಕೆ

  • 10 Jul 2026 02:53:37 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಮಾಲೆ (ಹೆಪಟೈಟಿಸ್-ಎ) ಸೋಂಕಿನ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ಡೋಂಗರಕೆರೆ, ಅಳಕೆ ಹಾಗೂ ಕುದ್ರೋಳಿ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. 

 

ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕು ಹರಡಿರುವ ಪ್ರದೇಶಗಳಲ್ಲಿ ಮನೆಮನೆ ಸಮೀಕ್ಷೆ, ಆರೋಗ್ಯ ತಪಾಸಣೆ ಹಾಗೂ ನೀರಿನ ಮಾದರಿಗಳ ಸಂಗ್ರಹ ಕಾರ್ಯ ಕೈಗೊಳ್ಳಲಾಗಿದೆ. ಕೆಲವು ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

 

ಜ್ವರ, ಹಸಿವಿನ ಕೊರತೆ, ವಾಂತಿ, ಕಣ್ಣು ಅಥವಾ ಚರ್ಮ ಹಳದಿಯಾಗುವುದು ಮೊದಲಾದ ಲಕ್ಷಣಗಳು ಕಂಡುಬಂದರೆ ಸ್ವಯಂ ಔಷಧ ಸೇವನೆ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ ತಿಳಿಯಿರಿ: ಹೆಪಟೈಟಿಸ್-ಎ (ಸೋಂಕು ಕಾಮಾಲೆ) ಎಂದರೇನು? ಲಕ್ಷಣಗಳು, ಕಾರಣಗಳು ಮತ್ತು ಮುನ್ನೆಚ್ಚರಿಕೆಗಳು