ಮಂಗಳೂರು: ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 23ಕ್ಕೂ ಹೆಚ್ಚು ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ರೌಡಿ ಇಮ್ರಾನ್ ಅಲಿಯಾಸ್ ಸುಮೋನ್ ಇಮ್ರಾನ್ನನ್ನು ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧನದಿಂದ ತಪ್ಪಿಸಿಕೊಳ್ಳಲು ಆರೋಪಿ ಮಹಿಳೆಯರ ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ಸಂಚರಿಸುತ್ತಿದ್ದಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಚಲನವಲನಗಳ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಉಳ್ಳಾಲ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಆರೋಪಿ ವಿರುದ್ಧ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ದರೋಡೆ, ಹಲ್ಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಒಟ್ಟು 23 ಪ್ರಕರಣಗಳಲ್ಲಿ ಆತ ಬೇಕಾಗಿದ್ದ ಎನ್ನಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ





