ನವದೆಹಲಿ: ಸರ್ಕಾರಿ ದೂರಸಂಪರ್ಕ ಸಂಸ್ಥೆ BSNL ತನ್ನ 2026-27ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕ (Q1)ದಲ್ಲಿ ಪ್ರಮುಖ ವ್ಯವಹಾರ ಆದಾಯದಲ್ಲಿ ಶೇ.10ರಷ್ಟು ಬೆಳವಣಿಗೆ ದಾಖಲಿಸಿದೆ.
ಕಳೆದ ವರ್ಷದ ಇದೇ ಅವಧಿಯಲ್ಲಿ BSNL ₹4,017 ಕೋಟಿ ಆದಾಯ ಗಳಿಸಿತ್ತು. ಈ ಬಾರಿ ಅದು ₹4,418 ಕೋಟಿಗೆ ಏರಿಕೆಯಾಗಿದೆ. ಇದರಿಂದ ಸಂಸ್ಥೆಯ ಸೇವೆಗಳ ಮೇಲಿನ ಗ್ರಾಹಕರ ವಿಶ್ವಾಸ ಮತ್ತು ಆದಾಯದಲ್ಲಿ ಉತ್ತಮ ಬೆಳವಣಿಗೆ ಕಂಡುಬಂದಿರುವುದು ಸ್ಪಷ್ಟವಾಗಿದೆ.
ಈ ಅಂಕಿ-ಅಂಶಗಳು BSNL ತನ್ನ ವ್ಯವಹಾರವನ್ನು ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ ಸಾಗುತ್ತಿದೆ ಎಂಬುದನ್ನು ಸೂಚಿಸುತ್ತವೆ.





