15 July 2026 |

ಪುತ್ತೂರು: ಗ್ರಾಮ ಪಂಚಾಯತ್ ಚುನಾವಣೆ- ಪುತ್ತಿಲ ಪರಿವಾರ ಸ್ಪರ್ಧೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ

  • 14 Jul 2026 03:39:52 PM

ಪುತ್ತೂರು: ತಾಲೂಕಿನ ಕೆಲ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ದವಾಗಿದೆ. ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆ ಕುರಿತು ಕರಾವಳಿ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿವೆ.

 

ಸದ್ಯಕ್ಕೆ ಪುತ್ತಿಲ ಪರಿವಾರದಿಂದ ಯಾವುದೇ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿಲ್ಲ. ಆದರೆ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳು ನಡೆಯುತ್ತಿವೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

 

ಒಂದು ವೇಳೆ ಪುತ್ತಿಲ ಪರಿವಾರ ಚುನಾವಣಾ ಕಣಕ್ಕಿಳಿದರೆ, ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

 

ಆದಾಗ್ಯೂ, ಅಭ್ಯರ್ಥಿಗಳ ಸ್ಪರ್ಧೆ ಹಾಗೂ ಅಂತಿಮ ನಿರ್ಧಾರದ ಕುರಿತು ಪುತ್ತಿಲ ಪರಿವಾರದಿಂದ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ.