21 September 2026 |

ದಕ್ಷಿಣ ಕನ್ನಡಕ್ಕೆ ಡಾ. ವಿ. ರಾಮ್ ಪ್ರಸಾದ್ ಮನೋಹರ್, ಉಡುಪಿಗೆ ರೋಹಿಣಿ ಸಿಂಧೂರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ

  • 15 Jul 2026 10:44:34 AM

ಬೆಂಗಳೂರು: ರಾಜ್ಯ ಸರ್ಕಾರವು ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆಗಾಗಿ 31 ಹಿರಿಯ ಐಎಎಸ್ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕ ಮಾಡಿದೆ.

 

ಈ ನೇಮಕಾತಿಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ಡಾ. ವಿ. ರಾಮ್ ಪ್ರಸಾದ್ ಮನೋಹರ್ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಿಸಲಾಗಿದೆ.

 

ಉಸ್ತುವಾರಿ ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಯ ಜಿಲ್ಲೆಗಳಿಗೆ ಭೇಟಿ ನೀಡಿ ಶಿಕ್ಷಣ, ಆರೋಗ್ಯ, ಕೃಷಿ, ಮೂಲಸೌಕರ್ಯ ಹಾಗೂ ವಿವಿಧ ಕಲ್ಯಾಣ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಜೊತೆಗೆ ಸಾರ್ವಜನಿಕರ ಅಹವಾಲುಗಳ ಕುರಿತು ಗಮನಹರಿಸಿ, ಜಿಲ್ಲಾಡಳಿತದ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

 

ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳ ಜವಾಬ್ದಾರಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ.