16 July 2026 |

ಬಂಟ್ವಾಳದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ

  • 15 Jul 2026 04:50:27 PM

ಬಂಟ್ವಾಳ: ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಸಮೀಪದ ಅತ್ತಳಿಕೆ ಪ್ರದೇಶದಲ್ಲಿ ನಡೆದಿದೆ.

 

ಮೃತರನ್ನು ಕಾವಳಪಡೂರು ನಿವಾಸಿ ಪ್ರಮೋದ್ (42) ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಸುನಿಲ್ ಹಾಗೂ ಕಾರ್ಮಿಕ ವಿಜಯ್ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಲಾರಿಯು ಕೆಂಪುಕಲ್ಲು ತುಂಬಿಕೊಂಡು ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಪ್ರಕಾರ, ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

 

ಅಪಘಾತದ ಬಳಿಕ ಲಾರಿಯ ಅಡಿಯಲ್ಲಿ ಸಿಲುಕಿದ್ದವರನ್ನು ಜೆಸಿಬಿ ಯಂತ್ರದ ಸಹಾಯದಿಂದ ಹೊರತೆಗೆದು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು.

 

ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸ್ ಠಾಣೆಯ ಎಸ್‌ಐ ಆದರ್ಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.