ಕೇಂದ್ರ ಗೃಹ ಸಚಿವಾಲಯದ ಮಾಜಿ ಅಧೀನ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಅವರು ಪಾಕಿಸ್ತಾನಿ ಕ್ರಿಕೆಟ್ ತಂಡದ ಸದಸ್ಯರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಎಎನ್ಐ (ANI) ಪಾಡ್‌ಕಾಸ್ಟ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತಕ್ಕೆ ಕ್ರಿಕೆಟ್ ಆಡಲು ಬಂದಿದ್ದ ಪಾಕಿಸ್ತಾನಿ ತಂಡದ ಕೆಲವು ಸದಸ್ಯರು ಹಾಗೂ ಪ್ರತಿನಿಧಿಗಳು ಮಾದಕವಸ್ತುಗಳ ಕಳ್ಳಸಾಗಣೆಯಲ್ಲಿ ತೊಡಗಿಕೊಂಡಿದ್ದರು ಎಂದು ಆರೋಪಿಸಿದ್ದಾರೆ.
ಈ ವೇಳೆ ಅವರು ಮಾಜಿ ಪಾಕಿಸ್ತಾನಿ ಕ್ರಿಕೆಟಿಗರಾದ ಶೋಯೆಬ್ ಅಖ್ತರ್ ಮತ್ತು ಮೊಹಮ್ಮದ್ ಆಸಿಫ್ ಅವರ ಹೆಸರನ್ನೂ ಉಲ್ಲೇಖಿಸಿದ್ದಾರೆ.
ಆದರೆ, ತಮ್ಮ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ದಾಖಲೆ, ತನಿಖಾ ವರದಿ ಅಥವಾ ನ್ಯಾಯಾಲಯದ ತೀರ್ಪನ್ನು ಅವರು ಈ ಸಂದರ್ಶನದಲ್ಲಿ ಮಂಡಿಸಿಲ್ಲ.
ಇಲ್ಲಿಯವರೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಥವಾ ಆರೋಪದಲ್ಲಿ ಉಲ್ಲೇಖಿಸಲಾದ ಆಟಗಾರರಿಂದ ಈ ಕುರಿತು ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.





