ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಲಭ್ಯವಾದ ಮಾಹಿತಿಯ ಪ್ರಕಾರ, ಬಂಧನಕ್ಕೂ ಮುನ್ನ ಆರೋಪಿ ಇಲಿ ವಿಷ (Rat Poison) ಸೇವಿಸಿದ್ದಾನೆ ಎನ್ನಲಾಗಿದೆ. ಅಸ್ವಸ್ಥಗೊಂಡಿದ್ದ ಆರೋಪಿಯನ್ನು ಪೊಲೀಸರು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಸ್ತುತ ಆರೋಪಿಯ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು, ಪೊಲೀಸರು ಆಸ್ಪತ್ರೆಯಲ್ಲಿಯೇ ಭದ್ರತೆ ಒದಗಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಆರೋಪಿಯಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.
ಪೊಲೀಸರು ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ತನಿಖೆ ಪೂರ್ಣಗೊಂಡ ಬಳಿಕ ತಿಳಿದುಬರುವ ನಿರೀಕ್ಷೆಯಿದೆ.





