ಬಂಟ್ವಾಳ: ಕಕ್ಕೆಪದವು ನಿವಾಸಿ ಲಾವಣ್ಯ ಗೌಡ ಹತ್ಯೆ ಪ್ರಕರಣದ ಆರೋಪಿ ಚೇತನ್ ಗೌಡನನ್ನು ಶುಕ್ರವಾರ ಮಂಗಳೂರಿನ ಪಚ್ಚನಾಡು ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧನದ ವೇಳೆ ಆರೋಪಿ ತಾನು ಇಲಿಪಾಶನ (ವಿಷ) ಸೇವನೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯಲ್ಲಿ ಚೇತನ್ ಗೌಡಗೆ ಚಿಕಿತ್ಸೆ ಮುಂದುವರಿದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಲಾವಣ್ಯ ಗೌಡ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯ ಆರೋಗ್ಯದಲ್ಲಿ ಸುಧಾರಣೆ ಕಂಡ ಬಳಿಕ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.





