ತುಮಕೂರು: ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವಾಗ ಸೀರೆ, ಬುರ್ಖಾ, ದುಪಟ್ಟಾ ಅಥವಾ ಉದ್ದವಾದ ಉಡುಪುಗಳನ್ನು ಸರಿಯಾಗಿ ಹಿಡಿದುಕೊಳ್ಳದಿದ್ದರೆ ಜೀವಕ್ಕೆ ಅಪಾಯ ಉಂಟಾಗಬಹುದು ಎಂಬುದನ್ನು ಮತ್ತೊಮ್ಮೆ ನೆನಪಿಸುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.
38 ವರ್ಷದ ಫಾತಿಮಾ ಅವರು ತಮ್ಮ ತಂದೆಯೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಹಿಂಬದಿಯಲ್ಲಿ ಕುಳಿತಿದ್ದ ಅವರ ಬುರ್ಖಾ ಆಕಸ್ಮಿಕವಾಗಿ ಬೈಕ್‌ನ ಹಿಂಬದಿ ಚಕ್ರಕ್ಕೆ ಸಿಲುಕಿದೆ. ಇದರಿಂದ ಅವರು ಬೈಕ್‌ನಿಂದ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಬೈಕ್‌ನಲ್ಲಿ ಪ್ರಯಾಣಿಸುವಾಗ ಸೀರೆ, ಬುರ್ಖಾ, ದುಪಟ್ಟಾ ಅಥವಾ ಉದ್ದವಾದ ಉಡುಪುಗಳು ಚಕ್ರದ ಬಳಿ ತೂಗದಂತೆ ನೋಡಿಕೊಳ್ಳದೆ ಇದ್ದರೆ ಇಂತಹ ಅನಾಹುತಗಳು ಸಂಭವಿಸುತ್ತದೆ. ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಅಪಾಯವಾಗಬಹುದು





