ಧರ್ಮಸ್ಥಳ: ರಾಜ್ಯದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಶುಕ್ರವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಇಬ್ಬರೂ ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಹಿತಾಸಕ್ತಿ ವಿಚಾರಗಳ ಕುರಿತು ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಭೇಟಿ ವೇಳೆ ಡಾ. ಹೆಗ್ಗಡೆಯವರು ಸಚಿವ ಯು.ಟಿ. ಖಾದರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಶಾಲು ಹೊದಿಸಿ ಗೌರವಿಸಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ಸಚಿವ ಯು.ಟಿ. ಖಾದರ್ ಅವರ ಆಗಮನದ ವೇಳೆ ಧರ್ಮಸ್ಥಳದ ಪ್ರಮುಖರಾದ ಡಿ. ಹರ್ಷೇಂದ್ರ ಕುಮಾರ್ ಅವರು ಪುಷ್ಪಗುಚ್ಛ ಹಾಗೂ ಮಾಲಾರ್ಪಣೆ ಮಾಡಿ ಆತ್ಮೀಯ ಸ್ವಾಗತ ಕೋರಿದರು.





