19 July 2026 |

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

  • 18 Jul 2026 05:46:03 PM

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಶನಿವಾರ ನಿಧನರಾದರು. 

 

ಅವರು ಕೆಲ ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.  

 

ಚೆನ್ನಮ್ಮ ಅವರ ಅಗಲಿಕೆಗೆ ರಾಜಕೀಯ ಗಣ್ಯರು, ವಿವಿಧ ಪಕ್ಷಗಳ ನಾಯಕರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. 

 

ಅವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆಯ ಕುರಿತು ಕುಟುಂಬದವರು ಶೀಘ್ರದಲ್ಲೇ ಮಾಹಿತಿ ನೀಡುವ ಸಾಧ್ಯತೆಯಿದೆ.