21 September 2026 |

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ಕ್ಯಾಮೆರಾಗಳು ಸಕ್ರಿಯ; ವಾಹನ ಸವಾರರೇ, ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ತಪ್ಪದು!

  • 19 Jul 2026 11:53:10 AM

ದಕ್ಷಿಣ ಕನ್ನಡ: ಮಂಗಳೂರು–ಕಲ್ಲಡ್ಕ–ಉಪ್ಪಿನಂಗಡಿ ಮೂಲಕ ಬೆಂಗಳೂರು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ (NH-75) ಹೊಸದಾಗಿ ಅಳವಡಿಸಲಾಗಿರುವ AI ಆಧಾರಿತ ಸಂಚಾರ ನಿಗಾ ಕ್ಯಾಮೆರಾಗಳು ಈಗ ಕಾರ್ಯಾರಂಭ ಮಾಡಿವೆ.

 

ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿತ ಇಲಾಖೆ ಮನವಿ ಮಾಡಿದೆ.

 

ಅತಿವೇಗದಲ್ಲಿ ವಾಹನ ಚಲಾಯಿಸುವುದು, ಚಾಲನೆ ವೇಳೆ ಮೊಬೈಲ್ ಫೋನ್ ಬಳಸುವುದು, ಕಾರಿನಲ್ಲಿ ಸೀಟ್‌ಬೆಲ್ಟ್ ಧರಿಸದಿರುವುದು, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದಿರುವುದು ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆಗಳು ಕ್ಯಾಮೆರಾದಲ್ಲಿ ದಾಖಲಾಗುವ ಸಾಧ್ಯತೆ ಇದೆ.

 

ನಿಯಮ ಉಲ್ಲಂಘನೆಯ ಪ್ರಕರಣಗಳಲ್ಲಿ ಮೋಟಾರು ವಾಹನ ಕಾಯ್ದೆಯ ಅನ್ವಯ ಇ-ಚಲನ್ ಅಥವಾ ಇತರೆ ಕಾನೂನು ಕ್ರಮ ಜಾರಿಯಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಹಾಗೂ ಸುರಕ್ಷಿತವಾಗಿ ವಾಹನ ಚಲಾಯಿಸುವಂತೆ ಸೂಚಿಸಲಾಗಿದೆ.