21 September 2026 |

ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರಿಗೆ ಅಂತಿಮ ವಿದಾಯ; ನಾಳೆ ಜುಲೈ 20 ರಂದು ಹರದನಹಳ್ಳಿಯಲ್ಲಿ ಅಂತ್ಯಸಂಸ್ಕಾರ

  • 19 Jul 2026 04:07:04 PM

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ (85) ಅವರು ಶುಕ್ರವಾರ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಸಿರಾಟದ ತೊಂದರೆ ಹಾಗೂ ಹೃದಯ ಸಂಬಂಧಿತ ಸಮಸ್ಯೆಯಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

 

ಕೆಲವು ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಚೇತರಿಕೆ ಕಂಡುಬರದೇ ಅವರು ನಿಧನರಾದರು.

 

ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಶನಿವಾರ ರಾತ್ರಿ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತರಲಾಗಿದ್ದು, ಭಾನುವಾರ ಬೆಳಗ್ಗಿನಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

 

ನಾಳೆ (ಜುಲೈ 20) ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಕುಟುಂಬ ಸದಸ್ಯರು, ರಾಜಕೀಯ ಗಣ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನಡೆಯುತ್ತಿದೆ. ಭಾರೀ ಸಂಖ್ಯೆಯಲ್ಲಿ ಜನರು ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ.