21 September 2026 |

ಮದ್ದಡ್ಕ ಬಳಿ ಸರಣಿ ರಸ್ತೆ ಅಪಘಾತ: ಡಿಪ್ಲೊಮಾ ವಿದ್ಯಾರ್ಥಿ ದುರ್ಮರಣ

  • 19 Jul 2026 04:24:19 PM

ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಮಸೀದಿ ಸಮೀಪ ಶುಕ್ರವಾರ (ಜು.18) ಸಂಜೆ ಬೈಕ್ ಮತ್ತು ಸ್ಕೂಟರ್‌ಗಳ ನಡುವೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಯುವ ಬೈಕ್ ಸವಾರನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

 

ಅಪಘಾತದಲ್ಲಿ ಮೃತಪಟ್ಟವರು ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಬಳ್ಳಮಂಜದ ದರ್ಜೆದಕೊಡಿ ನಿವಾಸಿ ಕೌಶಿಕ್ (18) ಎಂದು ಗುರುತಿಸಲಾಗಿದೆ. ಅವರು ಬಂಟ್ವಾಳದಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

 

ಘಟನೆಯಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಸುಮಾರು 60 ವರ್ಷದ ಸಂಜಯ್ ಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಅಚ್ಚಬೆ ನಿವಾಸಿ ಭರತ್ ಕೂಡ ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭಿಸಿದೆ.

 

ಅಪಘಾತದ ಸುದ್ದಿ ತಿಳಿದ ತಕ್ಷಣ ಬೆಳ್ತಂಗಡಿ ಸಂಚಾರಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಕುರಿತು ತನಿಖೆ ಮುಂದುವರಿಸಿದ್ದಾರೆ.