ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.
ಮಿತ್ತಡ್ಕ ನಿವಾಸಿಯಾಗಿರುವ 26 ವರ್ಷದ ಪ್ರಜ್ಞಾ ಅವರು ಬಡಗನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಜೂನ್ 21ರಂದು ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಕಳೆದ ಕೆಲ ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಜ್ಞಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.





