21 July 2026 |

ಮಂಗಳೂರು: ಸೇಂಟ್ ಅಲೋಶಿಯಸ್ ಕಾಲೇಜು ಸಮೀಪ ಕಾರಿನ ಮೇಲೆ ಮರ ಉರುಳಿ ಬಿದ್ದ ದೃಶ್ಯ!

  • 20 Jul 2026 05:20:27 PM

ಮಂಗಳೂರು: ನಗರದ ಸೇಂಟ್ ಅಲೋಶಿಯಸ್ ಕಾಲೇಜು ಸಮೀಪ ಮರದ ಕೊಂಬೆ ಉರುಳಿ ಕಾರಿನ ಮೇಲೆ ಬಿದ್ದ ಪರಿಣಾಮ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆಯಲ್ಲಿ ಕಾರಿಗೆ ಹಾನಿಯಾಗಿದ್ದು, ಕಾರಿನ ಒಳಗಡೆ ಇದ್ದವರು ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.  

 

ಸ್ಥಳೀಯರ ಮಾಹಿತಿ ಪ್ರಕಾರ, ರಸ್ತೆ ಬದಿಯಲ್ಲಿದ್ದ ದೊಡ್ಡ ಮರ ಏಕಾಏಕಿ ಉರುಳಿ ರಸ್ತೆ ಮೇಲೆ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಘಟನೆಯ ತಕ್ಷಣ ಸ್ಥಳೀಯರು ಧಾವಿಸಿ ನೆರವು ನೀಡಿದ್ದು, ಬಳಿಕ ಅಧಿಕಾರಿಗಳು ಹಾಗೂ ಸ್ಥಳೀಯರು ಮರವನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಆರಂಭಿಸಿದರು. 

 

ಘಟನೆಯಿಂದ ವಾಹನಕ್ಕೆ ಗಮನಾರ್ಹ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.