ಮಂಗಳೂರು: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಜುಲೈ 21ರಂದು (ಮಂಗಳವಾರ) ಮಂಗಳೂರು, ಮೂಡುಬಿದಿರೆ, ಉಡುಪಿ, ಮಣಿಪಾಲ, ಕುಂದಾಪುರ, ಬೈಂದೂರು, ಕೊಲ್ಲೂರು, ಕುಂಭಾಶಿ, ಕೋಟೇಶ್ವರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿಗದಿತ ಅವಧಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಮೆಸ್ಕಾಂ ಪ್ರಕಟಿಸಿದೆ.
ಮಂಗಳೂರಿನ ವಿವಿಧ ಭಾಗಗಳಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಮೂಡುಬಿದಿರೆ ಪ್ರದೇಶದಲ್ಲಿ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಉಡುಪಿ ಹಾಗೂ ಮಣಿಪಾಲದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ. ಅಲ್ಲದೆ, ಹಿರಿಯಡ್ಕ, ಪರ್ಕಳ, ಪೆರ್ದೂರು, ಮಂದಾರ್ತಿ ಹಾಗೂ ಶಿರೂರು ಭಾಗಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯದಿಂದ ತೊಂದರೆ ತಪ್ಪಿಸಲು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಅಗತ್ಯವಿರುವ ವಿದ್ಯುತ್ ಉಪಕರಣಗಳನ್ನು ಮುಂಚಿತವಾಗಿಯೇ ಚಾರ್ಜ್ ಮಾಡಿಕೊಂಡು ತಮ್ಮ ದೈನಂದಿನ ಕಾರ್ಯಗಳನ್ನು ಯೋಜಿಸಿಕೊಳ್ಳುವಂತೆ ಮೆಸ್ಕಾಂ ಮನವಿ ಮಾಡಿದೆ.





