ಸುಳ್ಯ: ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ.100/2026ರ ಪ್ರಕರಣದ ತನಿಖೆ ವೇಳೆ, ಮೃತ ಮಹಿಳೆಯ ಪತಿಯ ಮನೆಯವರ ವಿರುದ್ಧ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಈ ಸಂಬಂಧ ಮೃತ ಮಹಿಳೆಯ ಮಾವ ಸಿ.ಪಿ. ಅಳವಿ (54), ಅತ್ತೆ ಅಯಿಷಾ ಸಿ.ಎ. ಹಾಗೂ ನಾದಿನಿ ಫಸಿಲಾ ಸಿ.ಎ. (29) ಅವರನ್ನು ಜುಲೈ 22ರಂದು ಬಂಧಿಸಲಾಗಿದೆ. ಆರೋಪಿಗಳನ್ನು ಸುಳ್ಯ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಸುಳ್ಯ: ಫಾತಿಮತ್ ನಿಶಾನಾ ಸಾವಿಗೆ ಹೊಸ ತಿರುವು; ಕೊಲೆ ಪ್ರಕರಣವಾಗಿ ದಾಖಲು





