ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಮುಖ ಆರೋಪಿಯೆಂದು ಶಂಕಿಸಲಾದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಪ್ರಕರಣದಲ್ಲಿ ಮೊಹಮ್ಮದ್ ಶಾಖಿರ್ ಎಂಬಾತನನ್ನು ಬಂಧಿಸಲಾಗಿದೆ. ಆತ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮಾರಿಪಳ್ಳ ಸುಜೀರು ಬದಿಗುಡ್ಡೆ ನಿವಾಸಿಯಾಗಿದ್ದು, ನ್ಯಾಯಾಲಯದ ಆದೇಶದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪ್ರಕರಣದಲ್ಲಿ ಕಳುವಾದ ಹಣ ಅಥವಾ ವಸ್ತುಗಳ ಪತ್ತೆ, ಘಟನೆಯಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಹಾಗೂ ಬಳಸಲಾದ ವಾಹನ ಸೇರಿದಂತೆ ಇತರೆ ಸಾಕ್ಷ್ಯಾಧಾರಗಳ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.





