ಪುತ್ತೂರು: ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಾಹನಗಳ ಬ್ಯಾಟರಿ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯಿಂದ ಮೂರು ವಾಹನಗಳಿಗೆ ಸೇರಿದ ಒಟ್ಟು ಐದು ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ಮೇ 14ರ ರಾತ್ರಿ ನಡೆದ ಈ ಕಳವು ಪ್ರಕರಣದ ತನಿಖೆ ವೇಳೆ ಕೇರಳದ ಕಾಸರಗೋಡು ಮೂಲದ ಅಬ್ದುಲ್ ಮಜಿದ್ (33) ಎಂಬಾತನ ಪಾತ್ರ ಬೆಳಕಿಗೆ ಬಂದಿದೆ.
ಆರೋಪಿ ಈಗಾಗಲೇ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2025 ಹಾಗೂ 2026ರಲ್ಲಿ ದಾಖಲಾಗಿದ್ದ ಐದು ಕಳವು ಪ್ರಕರಣಗಳಿಗೆ ಸಂಬಂಧಿಸಿ ಬಂಧಿತನಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.
ಜುಲೈ 20ರಂದು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ ವೇಳೆ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬ್ಯಾಟರಿ ಕಳವು ಪ್ರಕರಣದಲ್ಲಿ ತಾನೇ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ ಆತನಿಂದ ಕಳವು ಮಾಡಲಾಗಿದ್ದ ಐದು ಬ್ಯಾಟರಿಗಳನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ತನಿಖೆ ಮತ್ತು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.





