ಮಂಗಳೂರು: ನಗರದ ಸ್ಟ್ರೀಟ್ ಫುಡ್ ಪ್ರದೇಶದಲ್ಲಿರುವ ಬಿಸಿ ಬಿಸಿ ಆಹಾರ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನಾ ಅಧಿಕಾರಿಗಳು ಹಠಾತ್ ತಪಾಸಣೆ ನಡೆಸಿದ್ದಾರೆ.
ತಪಾಸಣೆ ವೇಳೆ ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕಾರಕವಾಗಿರುವ ನಿಷೇಧಿತ ಆಹಾರ ಬಣ್ಣಗಳನ್ನು ಬಳಸಿ ಆಹಾರ ತಯಾರಿಸುತ್ತಿದ್ದ ಕೆಲ ಮೊಮೊ ಮಳಿಗೆಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಸಂಬಂಧಿತ ಮಳಿಗೆಗಳಿಗೆ ಒಟ್ಟು ₹6,000 ದಂಡ ವಿಧಿಸಲಾಗಿದೆ.
ಇದೇ ವೇಳೆ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮುಂದಿನ ದಿನಗಳಲ್ಲಿಯೂ ಇಂತಹ ತಪಾಸಣೆಗಳು ಮುಂದುವರಿಯಲಿದ್ದು, ನಿಯಮ ಉಲ್ಲಂಘಿಸುವ ಆಹಾರ ಮಳಿಗೆಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.





