06 August 2026 |

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಅಬ್ಬರ: ಭಾರಿ ಮಳೆ, ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ

  • 24 Jul 2026 11:06:13 AM

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಹಾಗೂ ನೀರು ನುಗ್ಗುವ ಘಟನೆಗಳಿಂದ ಜನಜೀವನ ಅಸ್ತವ್ಯಸ್ತವಾಗಿದೆ.

 

ಮಹಾರಾಷ್ಟ್ರದ ನಾಸಿಕ್ ಹಾಗೂ ಪಾಲ್ಘರ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿದೆ. 

 

ದಕ್ಷಿಣ ಗುಜರಾತ್‌ನ ವಲ್ಸಾದ್ ಜಿಲ್ಲೆಯ ಉಮರ್‌ಗಾಂವ್ ತಾಲೂಕಿನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 43 ಇಂಚು ಮಳೆಯಾಗಿರುವುದರಿಂದ ಪರಿಸ್ಥಿತಿ ಗಂಭೀರಗೊಂಡಿದೆ.

 

ಇನ್ನೊಂದೆಡೆ, ಅಸ್ಸಾಂನಲ್ಲಿ ಪ್ರವಾಹದ ಅಬ್ಬರ ಮುಂದುವರಿದಿದ್ದು, 11 ಜಿಲ್ಲೆಗಳು ತೀವ್ರ ಹಾನಿಗೊಳಗಾಗಿವೆ. ಸುಮಾರು 6.53 ಲಕ್ಷ ಮಂದಿ ಪ್ರವಾಹದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

 

ಕಳೆದ 24 ಗಂಟೆಗಳಲ್ಲಿ 10 ಮಂದಿ ಮೃತಪಟ್ಟಿದ್ದು, ಪ್ರವಾಹಕ್ಕೆ ಬಲಿಯಾದವರ ಒಟ್ಟು ಸಂಖ್ಯೆ 41ಕ್ಕೆ ಏರಿಕೆಯಾಗಿದೆ.