ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮತದಾರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಪ್ರಗತಿ ಕುರಿತು ಮಹತ್ವದ ಸಭೆ ನಡೆಸಲಾಯಿತು.
ಸಭೆಯಲ್ಲಿ ಎಸ್ಐಆರ್ ಕಾಯ೯ದ ಪ್ರಗತಿ ಪರಿಶೀಲನೆ ನಡೆಸಿ, ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು, ಆನ್‌ಲೈನ್ ಅಪ್‌ಲೋಡ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸುವ ಕುರಿತು ಚರ್ಚಿಸಲಾಯಿತು. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಬಂಟ್ವಾಳ ಶಾಸಕ ಯು. ರಾಜೇಶ್ ನಾಯ್ಕ್ ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಹಾಗೂ ಬಂಟ್ವಾಳದ ಪ್ರಭಾರಿ ರಾಕೇಶ್ ರೈ ಕಡೆಂಜಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ್ ಹಾಗೂ ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೇವಪ್ಪ ಪೂಜಾರಿ, ಪ್ರಮುಖರಾದ ಬಿ. ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ಮಾಧವ ಮಾವೆ, ಸುರೋಜನಾ ಜಿ.ಕೆ. ಭಟ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





