26 July 2026 |

ಕರ್ನಾಟಕದ ಪ್ರಲ್ಹಾದ್ ಜೋಶಿ ಮುಂದಿನ ಕೇಂದ್ರ ಶಿಕ್ಷಣ ಸಚಿವ: ಧರ್ಮೇಂದ್ರ ಪ್ರಧಾನ ರಾಜೀನಾಮೆ ಬೆನ್ನಲ್ಲೇ ಈ ನಿರ್ಧಾರ

  • 25 Jul 2026 08:28:12 PM

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಬೆನ್ನಲ್ಲೇ, ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ಯಾರಿಗೆ ನೀಡಲಾಗುತ್ತದೆ ಎಂಬ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ಈ ನಡುವೆ ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಕೇಂದ್ರ ಶಿಕ್ಷಣ ಸಚಿವರಾಗಿ ನೇಮಕ ಮಾಡಲಾಗಿದೆ. 

 

ಪ್ರಲ್ಹಾದ್ ಜೋಶಿ ಅವರು ಈಗಾಗಲೇ ಕೇಂದ್ರ ಸಚಿವ ಸಂಪುಟದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವರು ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅವರು ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಹಾಗೂ ಗಣಿ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದರು. 

 

ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯ ನಂತರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ, ರಾಷ್ಟ್ರಪತಿ ಭವನ ಅಥವಾ ಪ್ರಧಾನ ಮಂತ್ರಿ ಕಾರ್ಯಾಲಯದಿಂದ ಈ ಕುರಿತು ಯಾವುದೇ ಅಧಿಕೃತ ಆದೇಶ ಅಥವಾ ಪ್ರಕಟಣೆ ಇನ್ನೂ ಹೊರಬಿದ್ದಿಲ್ಲ. ಸರ್ಕಾರದ ಅಧಿಕೃತ ಪ್ರಕಟಣೆ ಹೊರಬಂದ ಬಳಿಕವೇ ಹೊಸ ಸಚಿವರ ನೇಮಕಾತಿ ಅಥವಾ ಹೆಚ್ಚುವರಿ ಜವಾಬ್ದಾರಿಯ ಬಗ್ಗೆ ಸ್ಪಷ್ಟತೆ ಸಿಗಲಿದೆ.