ಬಂಟ್ವಾಳ: ಬಿ.ಸಿ.ರೋಡ್ ಜಂಕ್ಷನ್ ಸಮೀಪ ಚಲಿಸುತ್ತಿದ್ದ ಕಂಟೇನರ್ ಲಾರಿಯ ಹಿಂಬದಿಯ ಚಕ್ರ ಕಳಚಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ತಾಗಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹೆದ್ದಾರಿಯಲ್ಲಿ ಹೊರರಾಜ್ಯದ ಕಂಟೇನರ್ ಲಾರಿ ಸಂಚರಿಸುತ್ತಿದ್ದ ವೇಳೆ ಚಾಲಕ ಸಲೀಮ್ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದರಿಂದ ಹಿಂಬದಿಯ ಚಕ್ರ ಕಳಚಿಕೊಂಡಿದೆ ಎಂದು ತಿಳಿದುಬಂದಿದೆ.
ಕಳಚಿದ ಚಕ್ರ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರೆಸಿಲ್ಲ ಅವರಿಗೆ ಬಡಿದಿದ್ದು, ಅವರ ತಲೆ, ಭುಜ ಹಾಗೂ ಬೆನ್ನಿಗೆ ತೀವ್ರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.





