ಉಡುಪಿ: ನಗರದ ಜಿಲ್ಲಾ ನ್ಯಾಯಾಲಯದ ಎದುರು ಸೋಮವಾರ (ಜು. 27) ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿಯಂತ್ರಣ ಕಳೆದುಕೊಂಡ ಕಾರೊಂದು ಫುಟ್ಪಾತ್ಗೆ ನುಗ್ಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ರಸ್ತೆ ಬದಿಯಲ್ಲಿದ್ದ ಸೂಚನಾ ಫಲಕ ನೆಲಕ್ಕುರುಳಿದ್ದು, ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದೆ. ಕಾರನ್ನು ಮಹಿಳೆಯೊಬ್ಬರು ಚಾಲನೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಜೀವಹಾನಿ ಅಥವಾ ಗಂಭೀರ ಗಾಯಗಳಾಗಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದರು.





