21 September 2026 |

ರಾಹುಲ್ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ; ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಎಫ್‌ಐಆರ್

  • 29 Jul 2026 11:55:43 AM

ಉಡುಪಿ: ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಪ್ರಚೋದನಕಾರಿ ಹಾಗೂ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

 

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

 

ಪ್ರತಿಭಟನೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಶಾಸಕ ಯಶ್ಪಾಲ್ ಸುವರ್ಣ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಮುಖಂಡರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.