02 August 2026 |

ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಾಸಕ ಅಶೋಕ್ ರೈ ಭೇಟಿ; ಕಾಮಗಾರಿ ಪ್ರಗತಿ ಪರಿಶೀಲನೆ

  • 01 Aug 2026 06:46:55 PM

ಬಂಟ್ವಾಳ: ತಾಲೂಕಿನ ಶಂಭೂರಿನಲ್ಲಿ ನಿರ್ಮಾಣವಾಗುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ವೇಗವಾಗಿ ಸಾಗುತ್ತಿದೆ. ಯೋಜನೆಯ ಪ್ರಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಶಾಸಕ ಅಶೋಕ್ ರೈ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಸ್ಥಳದಲ್ಲೇ ಕಾಮಗಾರಿಯ ವಿವಿಧ ಹಂತಗಳನ್ನು ವೀಕ್ಷಿಸಿದ ಅವರು, ಯೋಜನೆಯ ಪ್ರಸ್ತುತ ಸ್ಥಿತಿಗತಿಗಳ ಕುರಿತು ಇಂಜಿನಿಯರ್‌ಗಳಿಂದ ಮಾಹಿತಿ ಪಡೆದು ಚರ್ಚೆ ನಡೆಸಿದರು. ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಂಡು ನಿಗದಿತ ಅವಧಿಯೊಳಗೆ ಯೋಜನೆಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಅಶೋಕ್ ರೈ, ಈ ಯೋಜನೆ ಪೂರ್ಣಗೊಂಡ ಬಳಿಕ ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಲಭ್ಯವಾಗಲಿದೆ ಎಂದು ಹೇಳಿದರು. ಇದರಿಂದ ಸ್ಥಳೀಯರ ದೀರ್ಘಕಾಲದ ಬೇಡಿಕೆ ಈಡೇರಲಿದ್ದು, ಶೀಘ್ರದಲ್ಲೇ ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.