ಪುತ್ತೂರು: ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿಯ ದಡದಲ್ಲಿ ಇಂದು (ಆಗಸ್ಟ್ 2) ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.
ಮೃತದೇಹದ ಬಗ್ಗೆ ಯಾವುದೇ ಮಾಹಿತಿ ಇರುವವರು ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.





