ಕಲ್ಲಡ್ಕ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಪ್ರದೇಶದಲ್ಲಿ ನಡೆದಿದೆ.
ಘಟನೆಯ ವೇಳೆ ಕಾರಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಾಗದೆ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಅತಿಯಾದ ಮಳೆ ಮತ್ತು ವೇಗದ ಚಾಲನೆ ಕಾರಣವಾಗಿರಬಹುದು ಎಂದು ತಿಳಿದು ಬಂದಿದೆ.





