ಪುತ್ತೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ರಸ್ತೆ ಬದಿಯ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಅಂಗಡಿಗೆ ನುಗ್ಗಿದ ಘಟನೆ ಪುತ್ತೂರಿನ ಪಡೀಲ್‌ನಲ್ಲಿ ನಡೆದಿದೆ.
ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಆಕ್ಟಿವಾ, ಲಾರಿ ಹಾಗೂ ಅಂಗಡಿಗೆ ಹಾನಿಯಾಗಿದೆ.
ಮಾಹಿತಿ ತಿಳಿದ ಕೂಡಲೇ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ.





