ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಆಗಸ್ಟ್ 8ರಂದು ರಜೆ ಘೋಷಿಸಲಾಗಿದೆ.
ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ರಜೆ ಅನ್ವಯವಾಗುತ್ತದೆ.
ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಈ ಸೂಚನೆಯನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.





