ಬಂಟ್ವಾಳ: ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ಕಲ್ಲಡ್ಕದಲ್ಲಿ ವಾಹನಗಳ ತಪಾಸಣೆ ನಡೆಸಲಾಯಿತು.
ತಪಾಸಣೆ ವೇಳೆ ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾಗಳನ್ನು ಹಾಗೂ ಮಾನ್ಯ ದಾಖಲೆಗಳನ್ನು ಹೊಂದಿರದ ವಾಹನಗಳನ್ನು ಗುರುತಿಸಲಾಯಿತು.
ನಿಯಮ ಉಲ್ಲಂಘಿಸಿರುವುದು ಕಂಡುಬಂದ ವಾಹನಗಳ ಚಾಲಕರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಂಡ ಪೊಲೀಸರು ದಂಡ ವಿಧಿಸಿದರು.
ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.





