10 August 2026 |

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಜನರಿಗೆ ಬೆದರಿಕೆ: ಇಬ್ಬರ ಬಂಧನ

  • 10 Aug 2026 10:49:30 AM

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೌಡಿಶೀಟರ್ ಶಕೀರ್ ಹಾಗೂ ಆತನೊಂದಿಗೆ ಇದ್ದ ಆಟೋ ಚಾಲಕ ಅಸ್ಪಕ್ ಎಂದು ಗುರುತಿಸಲಾಗಿದೆ.

 

ಭಾನುವಾರ ರಾತ್ರಿ ಸುಮಾರು 12ರಿಂದ 12.20ರ ನಡುವೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಶಕೀರ್ ಮದ್ಯ ಸೇವಿಸಿದ ಬಳಿಕ ಕತ್ತಿ ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಾ ಅಲ್ಲಿದ್ದ ಜನರಿಗೆ ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ.

 

ಈ ಕುರಿತು ಮಾಹಿತಿ ದೊರೆತ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿ ಆಯುಧ ಕಾಯ್ದೆ ಸೇರಿದಂತೆ ಅನ್ವಯವಾಗುವ ಇತರ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಮೂಲಗಳು ತಿಳಿಸಿವೆ.