ಬಂಟ್ವಾಳ: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವಸ್ಥಾನದ ಕಾರ್ಯನಿರ್ವಹಣಾ ಮಂಡಳಿ ಹಲವು ಮಹತ್ವದ ಸೂಚನೆಗಳನ್ನು ನೀಡಿದೆ.
ಹಿಂದೂ ಧಾರ್ಮಿಕ ಸಂಪ್ರದಾಯದಲ್ಲಿ ಮಗುವಿಗೆ ಮೊದಲ ಬಾರಿಗೆ ಅನ್ನ ನೀಡುವ ಪದ್ಧತಿ ಇದೆ. ಹರಕೆಯ ರೂಪದಲ್ಲಿಯೂ ದೇವಸ್ಥಾನಗಳಲ್ಲಿ ಮಕ್ಕಳಿಗೆ ಅನ್ನಪ್ರಸಾದ ನೀಡಲಾಗುತ್ತದೆ. ಇದೇ ರೀತಿಯಲ್ಲಿ 6 ತಿಂಗಳಿಂದ 1 ವರ್ಷದೊಳಗಿನ ಮಕ್ಕಳಿಗೆ ದೇವಸ್ಥಾನದಲ್ಲಿ ಅನ್ನಪ್ರಸಾದ ನೀಡುವ ವ್ಯವಸ್ಥೆ ಇರಲಿದೆ ಎಂದು ಕಾರ್ಯನಿರ್ವಹಣಾ ಮಂಡಳಿ ತಿಳಿಸಿದೆ.
ಇದರೊಂದಿಗೆ ದೇವಸ್ಥಾನದ ಆವರಣದಲ್ಲಿ ಬಾಲ್ಯ ವಿವಾಹ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭಕ್ತಾದಿಗಳು ದೇವಸ್ಥಾನದ ಆವರಣದಲ್ಲಿ ಬಾಲ್ಯ ವಿವಾಹ ನಡೆಸದಂತೆ ಮಂಡಳಿ ಸೂಚಿಸಿದೆ.
ಇನ್ನು ಆಗಸ್ಟ್ 18ರಿಂದ ದೇವಸ್ಥಾನದಲ್ಲಿ ಅಗರಬತ್ತಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದುಎಂದು ತಿಳಿಸಲಾಗಿದೆ.
ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳು ಈ ನಿಯಮಗಳು ಹಾಗೂ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಸಹಕರಿಸುವಂತೆ ಕಾರ್ಯನಿರ್ವಹಣಾ ಮಂಡಳಿ ಮನವಿ ಮಾಡಿದೆ.





