11 August 2026 |

ಡೀಸೆಲ್‌ಗೆ ಎಥೆನಾಲ್ ಸೇರ್ಪಡೆ ಸದ್ಯ ಸಾಧ್ಯವಿಲ್ಲ: ಕೇಂದ್ರ ಸರ್ಕಾರ

  • 11 Aug 2026 01:04:17 PM

ನವದೆಹಲಿ: ಡೀಸೆಲ್‌ನಲ್ಲಿ ಎಥೆನಾಲ್ ಮಿಶ್ರಣ ಮಾಡುವುದರಿಂದ ಅದರ ಕಾರ್ಯಕ್ಷಮತೆ ಹಾಗೂ ಶಕ್ತಿ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಸದ್ಯಕ್ಕೆ ಎಥೆನಾಲ್ ಮಿಶ್ರಿತ ಡೀಸೆಲ್‌ನ್ನು ವ್ಯಾಪಕವಾಗಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

 

ಡೀಸೆಲ್‌ಗೆ ಎಥೆನಾಲ್ ಸೇರಿಸಿದಾಗ ಅದರ ಉರಿಯುವ ತಾಪಮಾನದಲ್ಲಿ ಗಣನೀಯ ಇಳಿಕೆಯಾಗುತ್ತದೆ. ಇದರಿಂದ ಡೀಸೆಲ್‌ನಿಂದ ಲಭಿಸುವ ಶಕ್ತಿಯ ಪ್ರಮಾಣವೂ ಕಡಿಮೆಯಾಗುತ್ತದೆ. ಈ ತಾಂತ್ರಿಕ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವವರೆಗೆ ಡೀಸೆಲ್‌ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ಯೋಜನೆ ಜಾರಿಗೆ ತರಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

 

ಸದ್ಯ ದೇಶದಲ್ಲಿ ಎಥೆನಾಲ್ ಮಿಶ್ರಣ ಮಾಡಿ ಮಾರಾಟ ಮಾಡುತ್ತಿರುವುದು ಪೆಟ್ರೋಲ್ ಮಾತ್ರವಾಗಿದ್ದು, ಡೀಸೆಲ್‌ಗೆ ಈ ಪ್ರಕ್ರಿಯೆಯನ್ನು ವಿಸ್ತರಿಸುವ ಕುರಿತು ಯಾವುದೇ ತಕ್ಷಣದ ಸಾಧ್ಯತೆ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.