13 August 2026 |

ಕರ್ನಾಟಕದಲ್ಲಿ ಗುಟ್ಕಾ, ಪಾನ್‌ ಮಸಾಲಾ ಉತ್ಪನ್ನಗಳಿಗೆ ಒಂದು ವರ್ಷದ ನಿಷೇಧ

  • 12 Aug 2026 05:51:12 PM

ಬೆಂಗಳೂರು: ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ತಂಬಾಕು ಹಾಗೂ ನಿಕೋಟಿನ್ ಒಳಗೊಂಡಿರುವ ಗುಟ್ಕಾ ಮತ್ತು ಪಾನ್‌ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಅವಧಿಗೆ ನಿಷೇಧ ಹೇರಿದೆ.

 

ನಿಷೇಧದ ಅವಧಿಯಲ್ಲಿ ಇಂತಹ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಸಾಗಣೆ ಹಾಗೂ ಮಾರಾಟ ಮಾಡುವಂತಿಲ್ಲ. ಪ್ಯಾಕೆಟ್‌, ಸ್ಯಾಚೆಟ್‌ ಸೇರಿದಂತೆ ಯಾವುದೇ ರೂಪದಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಿದರೂ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

 

ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.