13 August 2026 |

ಬಂಟ್ವಾಳ: 5ನೇ ತರಗತಿ ವಿದ್ಯಾರ್ಥಿಯ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ

  • 13 Aug 2026 03:10:51 PM

ಬಂಟ್ವಾಳ: ಅಪಾಯದ ಸಂದರ್ಭದಲ್ಲಿ 5ನೇ ತರಗತಿ ವಿದ್ಯಾರ್ಥಿಯೊಬ್ಬ ತಕ್ಷಣ ತೆಗೆದುಕೊಂಡ ನಿರ್ಧಾರದಿಂದ ಸಂಭವಿಸಬಹುದಾಗಿದ್ದ ಗಂಭೀರ ಅನಾಹುತವೊಂದು ತಪ್ಪಿದೆ.

 

ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರಿಗೆ ಎದುರಾಗಿದ್ದ ಅಪಾಯವನ್ನು ತಪ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ.

 

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ತಯಾರಿ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಸಿಬ್ಬಂದಿಯೊಬ್ಬರ ಬೆರಳು ಆಕಸ್ಮಿಕವಾಗಿ ವಿದ್ಯುತ್ ಚಾಲಿತ ತುರಿಯುವ ಯಂತ್ರದಲ್ಲಿ ಸಿಲುಕಿಕೊಂಡಿತ್ತು. ತೀವ್ರ ನೋವಿನಿಂದ ಅವರು ಸಹಾಯಕ್ಕಾಗಿ ಕಿರುಚಿಕೊಂಡಿದ್ದಾರೆ.

 

ಆ ಸಮಯದಲ್ಲಿ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಾನ್ವಿತ್ ಕಿರುಚಾಟ ಕೇಳಿ ತಕ್ಷಣ ಅಲ್ಲಿಗೆ ಓಡಿ ಬಂದಿದ್ದಾನೆ. ಪರಿಸ್ಥಿತಿಯನ್ನು ಅರಿತ ಆತ ತಕ್ಷಣ ನೆರವಿಗೆ ಮುಂದಾಗಿದ್ದು, ಸಿಬ್ಬಂದಿಗೆ ಹೆಚ್ಚಿನ ಅಪಾಯ ಉಂಟಾಗುವುದನ್ನು ತಪ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಮಾನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.