14 August 2026 |

ಕಾವಳಪಡೂರಿನಲ್ಲಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸೇರಿ ರೂ.4.90 ಲಕ್ಷ ಮೌಲ್ಯದ ವಸ್ತು ವಶ

  • 14 Aug 2026 09:56:55 AM

ಬಂಟ್ವಾಳ: ಕಾವಳಪಡೂರು ಪ್ರದೇಶದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ ಹಾಗೂ ಗಾಂಜಾ ಸೇರಿದಂತೆ ಒಟ್ಟು ರೂ.4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

 

ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ ಐಪಿಎಸ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

 

ಪೊಲೀಸರ ಮಾಹಿತಿ ಪ್ರಕಾರ, ದಾಳಿಯಲ್ಲಿ ಸುಮಾರು ರೂ.2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ ಹಾಗೂ 30.34 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ ಮಾದಕ ವಸ್ತುಗಳ ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ಕಾರು ಹಾಗೂ ಐದು ಮೊಬೈಲ್ ಫೋನ್‌ಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಯಾರ್ ಮಂಗಳೂರು ಮೂಲದ ನಾಶೀರ್ ಹುಸೇನ್ (37), ಬಂಟ್ವಾಳ ಗೋಳ್ತಮಜಲು ನಿವಾಸಿ ಮಹಮ್ಮದ್ ಜುನೈದ್ (38) ಹಾಗೂ ಕಂಕನಾಡಿ ಮಂಗಳೂರು ಮೂಲದ ಮೊಹಮ್ಮದ್ ಆಫ್ರಿದಿ (24) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.