ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಸಮೀಪ ಆಗಸ್ಟ್ 15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಕುಮಾರಮಂಗಿಲ ಸಮೀಪದ ಬಂಬಿಲ ನಿವಾಸಿ ಅಭಿಲಾಷ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲಿ ಸಾರ್ವಜನಿಕರು ಸೇರಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮೃತ ಅಭಿಲಾಷ್ ಅವರು ತಂದೆ, ತಾಯಿ ಹಾಗೂ ಅಣ್ಣನನ್ನು ಅಗಲಿದ್ದಾರೆ. ಮಾಹಿತಿ ಪಡೆದ ಪುತ್ತೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.





