17 August 2026 |

ನಾಗರಪಂಚಮಿ ಹಿನ್ನೆಲೆ ಆ.17ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ

  • 16 Aug 2026 09:02:40 PM

ಮಂಗಳೂರು: ನಾಗರಪಂಚಮಿ ಹಬ್ಬದ ಅಂಗವಾಗಿ ಆಗಸ್ಟ್ 17, ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

 

ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಕಟಣೆ ಹೊರಬಿದ್ದಿದ್ದು, ರಜೆಯ ದಿನದಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ತಿಳಿಸಲಾಗಿದೆ.

 

ನಾಗರಪಂಚಮಿ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಿಗೆ ಅನುಕೂಲವಾಗುವಂತೆ ಈ ರಜೆ ಘೋಷಿಸಲಾಗಿದೆ.