20 August 2026 |

ನಾವು Gen Z ಗಳು, ಇದನ್ನೆಲ್ಲಾ ಸಹಿಸಲ್ಲ”: ಕಾರ್ಗಿಲ್ ಚೆಕ್‌ಪೋಸ್ಟ್‌ನಲ್ಲಿ ಪ್ರವಾಸಿಗೆಯ ಹುಚ್ಚಾಟ, ವಿಡಿಯೋ ವೈರಲ್!

  • 20 Aug 2026 11:13:59 AM

ಜಮ್ಮು-ಕಾಶ್ಮೀರ: ಕಾರ್ಗಿಲ್ ಪ್ರದೇಶದ ಚೆಕ್‌ಪೋಸ್ಟ್‌ನಲ್ಲಿ ಪ್ರವಾಸಿಗೆಯೊಬ್ಬರು ಅಧಿಕಾರಿಗಳೊಂದಿಗೆ ನಡೆಸಿದ ವಾಗ್ವಾದದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ವಿಡಿಯೋದಲ್ಲಿ, ಪ್ರವಾಸಿಗೆಯೊಬ್ಬರು ಭದ್ರತಾ ಸಿಬ್ಬಂದಿಯೊಂದಿಗೆ ಮಾತನಾಡುವ ವೇಳೆ “We are Gen Z, we won’t tolerate this nonsense” ಎಂದು ಹೇಳುತ್ತಿರುವುದು ಕಂಡುಬಂದಿದೆ. ಈ ಹೇಳಿಕೆ ನೆಟ್ಟಿಗರ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ಆರಂಭವಾಗಿದೆ.

 

ಘಟನೆಯ ವಿಡಿಯೋ ವೈರಲ್ ಆದ ಬಳಿಕ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಗಮನಕ್ಕೂ ವಿಚಾರ ಬಂದಿದೆ. ಅವರು ಕೂಡ ಈ ಘಟನೆ ಕುರಿತು ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.

 

ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರು ಸ್ಥಳೀಯ ನಿಯಮಗಳು ಹಾಗೂ ಭದ್ರತಾ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಬೇಕು ಎಂಬ ಅಭಿಪ್ರಾಯವೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

 

ವಿಡಿಯೋ ವೈರಲ್ ಆದ ಬೆನ್ನಲ್ಲೇ ‘Gen Z’ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.