24 August 2026 |

ನೇಜಾರು ತಾಯಿ-ಮಕ್ಕಳ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ಜೈಲಿನಲ್ಲಿ ಜೀವ ಬೆದರಿಕೆ

  • 23 Aug 2026 12:32:14 PM

ಉಡುಪಿ: ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಬೆಂಗಳೂರಿನ ಜೈಲಿನಲ್ಲಿ ಜೀವ ಬೆದರಿಕೆ ಎದುರಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಜಿಲ್ಲಾ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

 

ಆ.7ರಂದು ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್ ಮುಗಿದ ಬಳಿಕ ಪ್ರವೀಣ್ ಚೌಗುಲೆಯನ್ನು ಜೈಲು ಕೊಠಡಿಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಂಗಳೂರಿನವರು ಎಂದು ಹೇಳಿಕೊಂಡ 3-4 ಮಂದಿ ಜೈಲು ಕೈದಿಗಳು ಆತನಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

 

ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚೌಗುಲೆ ಈ ವಿಷಯವನ್ನು ನ್ಯಾಯಾಧೀಶರ ಗಮನಕ್ಕೆ ತಂದಿದ್ದಾನೆ. ತನ್ನ ಜೀವಕ್ಕೆ ಅಪಾಯವಿದೆ ಎಂದು ಆತ ನ್ಯಾಯಾಲಯಕ್ಕೆ ತಿಳಿಸಿದ್ದು, ಆತನ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.

 

ಆರೋಪಿಯ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಂಡು ಸೂಕ್ತ ಭದ್ರತೆ ಕಲ್ಪಿಸುವಂತೆ ಜೈಲು ಅಧಿಕಾರಿಗಳಿಗೆ ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ.