ಪುಣೆ: ಮಹಾರಾಷ್ಟ್ರದ ಪಿಂಪ್ರಿ-ಚಿಂಚವಾಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಯ ವಿವಾಹ ಇದೀಗ ಗಮನ ಸೆಳೆದಿದೆ.
ಇಬ್ಬರೂ ಒಂದೇ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪರಸ್ಪರ ವಿವಾಹವಾಗಲು ನಿರ್ಧರಿಸಿದ್ದಾರೆ. ವಿವಾಹಕ್ಕಾಗಿ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ರಜೆ ಅರ್ಜಿ ಸಲ್ಲಿಸಿದ್ದು, ಅದರೊಂದಿಗೆ ವಿವಾಹದ ಆಮಂತ್ರಣ ಪತ್ರವನ್ನೂ ನೀಡಿದ್ದಾರೆ ಎಂದು ವರದಿಯಾಗಿದೆ.
ಆಗಸ್ಟ್ 30ರಂದು ಆಳಂದಿಯಲ್ಲಿ ವಿವಾಹ ನಡೆಯಲಿದ್ದು, ಸಾಂಪ್ರದಾಯಿಕ ವೈದಿಕ ವಿಧಿವಿಧಾನಗಳ ಮೂಲಕ ವಿವಾಹವಾಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಇಬ್ಬರು ಪೊಲೀಸ್ ಸಿಬ್ಬಂದಿಯ ಈ ನಿರ್ಧಾರ ಇದೀಗ ಪೊಲೀಸ್ ಇಲಾಖೆಯಲ್ಲಷ್ಟೇ ಅಲ್ಲದೆ ಸ್ಥಳೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ.





